ADVERTISEMENT

ಎನ್‌ಎಲ್‌ಎಟಿ ಪ್ರವೇಶ ಪರೀಕ್ಷೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್‌

22 ಕಾನೂನು ಕಾಲೇಜುಗಳಲ್ಲೂ ’ಕ್ಲಾಟ್ –2020’ ಪ್ರಕಾರವೇ ಮುಂದುವರಿಯಲು ನಿರ್ದೇಶನ

ಪಿಟಿಐ
Published 21 ಸೆಪ್ಟೆಂಬರ್ 2020, 7:11 IST
Last Updated 21 ಸೆಪ್ಟೆಂಬರ್ 2020, 7:11 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಐದು ವರ್ಷಗಳ ಸಂಯೋಜಿತ ಬಿಎ–ಎಲ್‌ಎಲ್‌ಬಿ ಪದವಿ ಪ್ರವೇಶಕ್ಕಾಗಿ ಸೆಪ್ಟೆಂಬರ್ 12 ರಂದು ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ನಡೆಸಿದ ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌ -2020 ರಪ್ರತ್ಯೇಕ ಪ್ರವೇಶ ಪರೀಕ್ಷೆಯ ಅಧಿಸೂಚನೆಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.

ಇದೇ ವೇಳೆ,ಸೆಪ್ಟೆಂಬರ್ 28 ರಂದು ಬೆಂಗಳೂರಿನ ಎನ್‌ಎಲ್‌ಎಸ್‌ಐಯು ಸೇರಿದಂತೆ ದೇಶದಾದ್ಯಂತವಿರುವ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್‌ಎಲ್‌ಯು) ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ -2020) ಪ್ರಕಾರವೇ ಪ್ರವೇಶ ಪರೀಕ್ಷೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಎನ್‌ಎಲ್‌ಎಟಿ ನಿರ್ಧಾರ ಪ್ರಶ್ನಿಸಿ ಎನ್‌ಎಲ್‌ಎಸ್‌ಐಯು ಮಾಜಿ ಉಪಕುಲಪತಿ ಪ್ರೊ. ಆರ್. ವೆಂಕಟರಾವ್ ಮತ್ತು ಪ್ರವೇಶ ಪರಿಕ್ಷಾ ಆಕಾಂಕ್ಷಿಗಳ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ’ಕ್ಲಾಟ್‌’ ಪ್ರಕಾರವೇ ಪ್ರವೇಶ ಪರೀಕ್ಷೆ ನಡೆಸಲು ಸೂಚಿಸಿದೆ.

ADVERTISEMENT

ನ್ಯಾಯಮೂರ್ತಿಗಳಾದ ಆರ್ ಎಸ್ ರೆಡ್ಡಿ ಮತ್ತು ಎಂ ಆರ್ ಶಾ ಅವರನ್ನೂ ಒಳಗೊಂಡ ನ್ಯಾಯಪೀಠ, ಎಲ್ಲಾ ಎನ್‌ಎಲ್‌ಯುಗಳು ಅಕ್ಟೋಬರ್ ಮಧ್ಯಂದಿದಲೇ ತಮ್ಮ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಬೇಕು ಎಂದು ಹೇಳಿದರು.

ಎನ್‌ಎಲ್‌ಎಟಿ–2020 ಅಧಿಸೂಚನೆ ರದ್ದುಗೊಳಿಸಬೇಕೆಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 17ರಂದು ನಡೆಸಿದ್ದ ಸುಪ್ರೀಂ ಕೋರ್ಟ್,ಆದೇಶವನ್ನು ಕಾಯ್ದಿರಿಸಿತ್ತು. ಕಳೆದ ವಾರ ನ್ಯಾಯಾಲಯದಲ್ಲಿ ಎನ್‌ಎಲ್‌ಎಸ್‌ಐಯು, ಪ್ರತ್ಯೇಕ ಪರೀಕ್ಷೆ ನಡೆಸುವ ತನ್ನ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.