ADVERTISEMENT

ರಾಷ್ಟ್ರಪತಿ ಪ್ರಶ್ನಿಸಿರುವುದರಲ್ಲಿ ತಪ್ಪೇನಿದೆ: ಸುಪ್ರೀಂ ಕೋರ್ಟ್‌ ಪ್ರಶ್ನೆ

ಪಿಟಿಐ
Published 19 ಆಗಸ್ಟ್ 2025, 14:28 IST
Last Updated 19 ಆಗಸ್ಟ್ 2025, 14:28 IST
.
.   

ನವದೆಹಲಿ: ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಪ್ರಶ್ನಿಸಿತು.

ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಪರ ವಕೀಲರು ರಾಷ್ಟ್ರಪತಿಯವರು ಸ್ಪಷ್ಟನೆ ಕೋರಿರುವುದನ್ನು ವಿರೋಧಿಸಿದ್ದು, ಅದು ವಿಚಾರಣೆಗೆ ಯೋಗ್ಯವೇ ಎಂದು ಪ್ರಶ್ನಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು, ‘ರಾಷ್ಟ್ರಪತಿ ಸ್ಪಷ್ಟನೆ ಕೇಳಿರುವುದರಲ್ಲಿ ತಪ್ಪೇನಿದೆ? ಈ ವಿಚಾರದ ಪ್ರತಿವಾದವನ್ನು ನಿಜಕ್ಕೂ ನೀವು ಗಂಭೀರವಾಗಿ ಪರಿಗಣಿಸಿದ್ದೀರಾ?’ಎಂದು ಕೇಳಿತು.

ಸಂವಿಧಾನದ 143(1)ನೇ ವಿಧಿಯಡಿ ದತ್ತವಾದ ಅಧಿಕಾರವನ್ನು ಬಳಸಿಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟನೆ ಕೇಳಿದ್ದಾರೆ.

ADVERTISEMENT

ಕಾಲಮಿತಿಯೊಳಗೆ ಅಂಕಿತ ಹಾಕಬೇಕು ಎಂದು ಹೇಳುವುದರಿಂದ ಸರ್ಕಾರದ ಒಂದು ಅಂಗವೇ ಹೆಚ್ಚಿನ ಅಧಿಕಾರ ಹೊಂದಿದಂತಾಗಲಿದೆ. ಇದರಿಂದ ‘ಸಾಂವಿಧಾನಿಕ ವ್ಯವಸ್ಥೆಗೆ ಧಕ್ಕೆ’ ಉಂಟಾಗಲಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅಭಿಪ್ರಾಯ ದಾಖಲಿಸಿದೆ. 

‘ಈ ವಿಷಯದಲ್ಲಿ ನಮ್ಮ ವ್ಯಾಪ್ತಿಯು ಸಲಹೆ ನೀಡುವುದಕ್ಕಷ್ಟೆ ಸೀಮಿತವಾಗಿದೆ’ ಎಂದೂ ಪೀಠವು ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.