ADVERTISEMENT

ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಸೋಡಿಯಾಗೆ ಹಿನ್ನಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2023, 11:50 IST
Last Updated 28 ಫೆಬ್ರುವರಿ 2023, 11:50 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವ ಸಿಬಿಐ ನಡೆ ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಮನವಿ ಮಾಡುವಂತೆ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ತುರ್ತು ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠದ ಎದುರು ಹಿರಿಯ ವಕೀಲ ಎ.ಎಂ. ಸಿಂಘ್ವಿ ಮನವಿ ಮಾಡಿದ್ದರು.

ADVERTISEMENT

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಹೈಕೋರ್ಟ್‌ಗೆ ಹೋಗಬಹುದು ಎಂದು ನ್ಯಾಯಾಲಯವು ಆರಂಭದಲ್ಲಿ ಸೂಚಿಸಿತ್ತು. ಆದರೆ, ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯು ವಿನೋದ್ ದುವಾ ಪ್ರಕರಣದ ತೀರ್ಪಿನ ಅಡಿಯಲ್ಲಿ ಬರುತ್ತದೆ ಎಂದು ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದರು.

ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು 8 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ನಿನ್ನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಕೆ.ನಾಗ್ಪಾಲ್, ಸಿಸೋಡಿಯಾ ಅವರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.