
ಸುಪ್ರೀಂ ಕೋರ್ಟ್
ಅಮರಾವತಿ: ತಿರುಪತಿ ಲಾಡು ವಿವಾದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ವರದಿಯ ಪರಿಶೀಲನೆಗಾಗಿ ಆಂಧ್ರ ಪ್ರದೇಶ ಸರ್ಕಾರ ಏಕಸದಸ್ಯ ಸಮಿತಿ ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂ ಕೋರ್ಟ್ ನಿರ್ಧಾರವನ್ನು ಆಡಳಿತಾರೂಢ ಟಿಡಿಪಿ ಸ್ವಾಗತಿಸಿದೆ. ಪಕ್ಷದ ವಕ್ತಾರ ನಿಲಾಯಪಾಲೆಂ ವಿಜಯ್ ಕುಮಾರ್ ಅವರು, ‘ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಮಿತಿ ರಚನೆ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂಬುದನ್ನು ಸುಪ್ರೀಂ ಕೋರ್ಟ್ ದೃಢಪಡಿಸಿದೆ’ ಎಂದು ಹೇಳಿದ್ದಾರೆ.
ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು, ನಿವೃತ್ತ ಐಎಎಸ್ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಸಮಿತಿಯನ್ನು ರಚನೆ ಮಾಡಿದೆ. ಸುಪ್ರೀಂ ಕೋರ್ಟ್ ನೇಮಿಸಿದ್ದ ಸಿಬಿಐ ನೇತೃತ್ವದ ಎಸ್‌ಐಟಿ ವರದಿ ಸಲ್ಲಿಸಿದ ಬೆನ್ನಲ್ಲೇ ಸರ್ಕಾರ ಈ ಸಮಿತಿಯನ್ನು ನೇಮಕ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.