ಅಗರ್ತಲಾ: ತ್ರಿಪುರಾ ಮುನ್ಸಿಪಲ್ ಚುನಾವಣೆಗಳನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದೆ ಎಂದು ಅದು ಹೇಳಿದೆ.
‘ಈಗ ನಾವು ಚುನಾವಣೆ ಮುಂದೂಡಿದರೆ ಕೆಟ್ಟ ನಿದರ್ಶನವಾಗಿ ಉಳಿಯಲಿದೆ. ಮುಂದೂಡಿಕೆ ಕೊನೆಯ ಆಯ್ಕೆ ಆಗಬೇಕು’ಎಂದು ನ್ಯಾಯಾಲಯ ತಿಳಿಸಿದೆ.
ತ್ರಿಪುರಾದ ಉನ್ನತ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಇದರ ಪರಿಣಾಮವಾಗಿ ಮುನ್ಸಿಪಲ್ ಚುನಾವಣೆಗಳಲ್ಲಿ ನಮ್ಮ ಪ್ರಚಾರದ ಹಕ್ಕಿಗೆ ಧಕ್ಕೆಯಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷವು ನ್ಯಾಯಾಲಯದ ಮೆಟ್ಟಿಲೇರಿತ್ತು.
ತ್ರಿಪುರಾದಲ್ಲಿ ಪೊಲೀಸರಿಂದ ಟಿಎಂಸಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ, ಟಿಎಂಸಿ ಸಂಸದರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.