ADVERTISEMENT

ಸ್ನಾತಕೋತ್ತರ ವೈದ್ಯ ಕೋರ್ಸ್‌: ಪರೀಕ್ಷೆ ರದ್ದತಿಗೆ ‘ಸುಪ್ರೀಂ’ ನಕಾರ

ಪಿಟಿಐ
Published 18 ಜೂನ್ 2021, 21:33 IST
Last Updated 18 ಜೂನ್ 2021, 21:33 IST
   

ನವದೆಹಲಿ:ಪರೀಕ್ಷೆ ಬರೆಯಬೇಕಿರುವ ವೈದ್ಯರು ಕೋವಿಡ್‌ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂಬ ಕಾರಣಕ್ಕೆ ಸ್ನಾತಕೋತ್ತರ ವೈದ್ಯ ಕೋರ್ಸ್‌ನ ಅಂತಿಮ ಪರೀಕ್ಷೆಗಳನ್ನು ರದ್ದು ಮಾಡಬೇಕು ಅಥವಾ ಮುಂದೂಡಬೇಕು ಎಂದು ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ‍್ರೀಂ ಕೋರ್ಟ್‌ ಹೇಳಿದೆ.

ಅಂತಿಮ ವರ್ಷದ ಪರೀಕ್ಷೆಗಳ ದಿನಾಂಕ ನಿಗದಿ ಮಾಡುವಾಗ ಕೋವಿಡ್‌ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಪರಿಷತ್‌ (ಎನ್‌ಎಂಸಿ), ವಿಶ್ವವಿದ್ಯಾಲಯಗಳಿಗೆ ಈಗಾಗಲೇ ಸೂಚಿಸಿದೆ ಎಂಬುದನ್ನು ನ್ಯಾಯಾಲಯವು ಉಲ್ಲೇಖಿಸಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗಲು ಅಗತ್ಯ ಸಮಯ ನೀಡಬೇಕು ಎಂದು 29 ವೈದ್ಯರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

‘ಪರೀಕ್ಷೆಗೆ ಸಿದ್ಧರಾಗಲು ಅಗತ್ಯ ಸಮಯ ಎಷ್ಟು ಎಂಬುದು ನಮಗೆ ತಿಳಿದಿಲ್ಲ. ಈ ಸಮಯವನ್ನು ನ್ಯಾಯಾಲಯ ತೀರ್ಮಾನಿಸುವುದು ಹೇಗೆ ಸಾಧ್ಯ? ಪ್ರತಿಯೊಬ್ಬರಿಗೂ ಈ ಸಮಯ ಬೇರೆಯೇ ಆಗಿರಬಹುದು. ಹಾಗಾಗಿ, ಎನ್‌ಎಂಸಿಯ ಸಲಹೆಯಂತೆ ವಿಶ್ವವಿದ್ಯಾಲಯಗಳೇ ಪರೀಕ್ಷೆಯ ಬಗ್ಗೆ ತೀರ್ಮಾನಿಸಲಿ’ ಎಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂ.ಆರ್‌. ಶಾ ಅವರ ಪೀಠವು
ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.