
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಗುಂಡು ಹಾರಿಸುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಮತ್ತು ಸುಪ್ರೀಂ ಕೋರ್ಟ್
ಕೃಪೆ: @kcvenugopalmp
ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿ ರೈಫಲ್‌ನಿಂದ ಗುಂಡು ಹಾರಿಸುತ್ತಿರುವ ಘಟನೆ ಸಂಬಂಧ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಶರ್ಮಾ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಾಜಿ ಪ್ರಾಧ್ಯಾಪಕಾರದ ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಡಿಜಿಪಿ ಹರೇಕೃಷ್ಣ ದೇಕಾ, ಹಿರಿಯ ಪತ್ರಕರ್ತರಾದ ಪರೇಶ್ ಚಂದ್ರ ಹಾಗೂ ಹಿರಿಯ ವಕೀಲರಾದ ಶಾಂತನು ಬೋರ್‌ಠಾಕೂರ್ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠವು ಅರ್ಜಿ ವಿಚಾರಣೆ ನಡೆಸಿತು.
‘ನೀವು ಗುವಾಹಟಿ ಹೈಕೋರ್ಟ್‌ಗೆ ಏಕೆ ಹೋಗಿಲ್ಲ?, ಹೈಕೋರ್ಟ್‌ನ ಅಧಿಕಾರವನ್ನು ದುರ್ಬಲಗೊಳಿಸಬಾರದು’ ಎಂದು ಅರ್ಜಿದಾರರಿಗೆ ಸೂಚಿಸಿರುವ ನ್ಯಾಯಪೀಠವು, ಈ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ನಿರ್ದೇಶನ ನೀಡಿದೆ.
ಫೆಬ್ರುವರಿ 7ರಂದು ಶರ್ಮಾ ಅವರು ರೈಫಲ್ ಹಿಡಿದು ಅಲ್ಪಸಂಖ್ಯಾತ ಸಮುದಾಯದವನ್ನು ಬಿಂಬಿಸುವ ಇಬ್ಬರು ವ್ಯಕ್ತಿಗಳ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವ ದೃಶ್ಯವನ್ನು ಒಳಗೊಂಡ ವಿಡಿಯೊವನ್ನು ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿತ್ತು. ವಿಡಿಯೊ ಕುರಿತು ಭಾರಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಬಿಜೆಪಿ ಪೋಸ್ಟ್ ಅನ್ನು ಅಳಿಸಿ ಹಾಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.