ADVERTISEMENT

ಕನಿಷ್ಠ ವೇತನ: ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ

ಪಿಟಿಐ
Published 29 ಜನವರಿ 2026, 10:44 IST
Last Updated 29 ಜನವರಿ 2026, 10:44 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಮನೆ ಕೆಲಸದವರಿಗೆ ಕಾನೂನು ಚೌಕ್ಕಟ್ಟಿನಲ್ಲಿ ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು.

ದೇಶದಲ್ಲಿ ಕಾರ್ಮಿಕ ಸಂಘಟನೆಗಳು ಏನು ಕೆಲಸ ಮಾಡುತ್ತಿವೆ ಎಂಬುದು ಗೊತ್ತಿದೆ, ಕಡ್ಡಾಯ ಕನಿಷ್ಠ ವೇತನ ನಿಗದಿ ಮಾಡಿದರೆ ಕೆಲಸ ಕೊಡುವವರನ್ನು ಸಂಕಷ್ಟಕ್ಕೆ ತಳ್ಳಬಹುದು. ಏಕೆಂದರೆ ಕಾರ್ಮಿಕ ಸಂಘಗಳು ಪ್ರತಿಯೊಂದು ಮನೆಯನ್ನೂ ಮೊಕದ್ದಮೆಗೆ ಎಳೆಯಬಹುದು. ಈ ಬೆಳವಣಿಗೆ ಗೃಹ ಕಾರ್ಮಿಕರನ್ನು ನೇಮಿಸಿಕೊಳ್ಳುವಲ್ಲಿ ಹಿಂಜರಿಕೆಗೆ ಕಾರಣವಾಗಬಹುದು ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.

ADVERTISEMENT

ಕಾನೂನು ಬದಲಾವಣೆ ಸಂದರ್ಭದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಸೀಮಿತ ಅಧಿಕಾರವಿದೆ, ಅರ್ಜಿದಾರರು ಸಂಬಂಧಪಟ್ಟ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಲು ಪೀಠವು ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.