ADVERTISEMENT

ಲಸಿಕೆ ಹಾಕಿಸಿಕೊಳ್ಳಲು ಯಾರಿಗೂ ಬಲವಂತ ಮಾಡಬಾರದು: ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮೇ 2022, 7:50 IST
Last Updated 2 ಮೇ 2022, 7:50 IST
   

ನವದೆಹಲಿ: ಯಾವುದೇ ವ್ಯಕ್ತಿಯನ್ನು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಬಲವಂತ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಪ್ರಸ್ತುತ ಲಸಿಕೆ ನೀತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಕೋರ್ಟ್, ಸಂಪೂರ್ಣ ನೀತಿಯು ಅಸಮಂಜಸ ಮತ್ತು ಅನಿಯಂತ್ರಿತವಾಗಿದೆ ಎಂದು ಹೇಳಲು ಬರುವುದಿಲ್ಲ ಎಂದಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಸಾರ್ವಜನಿಕರ ಒಳಿತಿಗಾಗಿ ವಿಶಾಲ ದೃಷ್ಟಿಕೋನದಿಂದ ಸರ್ಕಾರವು ಕೆಲವು ನೀತಿಯನ್ನು ರೂಪಿಸಬಹುದು ಮತ್ತು ಷರತ್ತುಗಳನ್ನು ವಿಧಿಸಬಹುದು ಎಂದು ಕೋರ್ಟ್ ತಿಳಿಸಿದೆ.

ADVERTISEMENT

ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸುವ ಕುರಿತಂತೆ ಕೆಲವು ರಾಜ್ಯ ಸರ್ಕಾರಗಳು, ಸಂಸ್ಥೆಗಳು ವಿಧಿಸಿರುವ ಷರತ್ತುಗಳು ಸರಿಯಾದುದಲ್ಲ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಪರಿಸ್ಥಿತಿಗಳಲ್ಲಿ ಅವುಗಳನ್ನು ಹಿಂಪಡೆಯಬೇಕು ಎಂದೂ ಹೇಳಿದೆ.

ಇದೇವೇಳೆ, ಕೋವಿಡ್-19 ಲಸಿಕೆಯಿಂದಾಗುವ ಅಡ್ಡ ಪರಿಣಾಮಗಳ ಕುರಿತ ದತ್ತಾಂಶವನ್ನು ಬಹಿರಂಗಗೊಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ ನೀಡಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.