ADVERTISEMENT

ಎಟಿಪಿಎಂಎಲ್‌ಎ ಸ್ಥಾನ ಭರ್ತಿ: ವಿವರಣೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿಟಿಐ
Published 29 ಜನವರಿ 2021, 10:30 IST
Last Updated 29 ಜನವರಿ 2021, 10:30 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಸಕ್ಷಮ ಪ್ರಾಧಿಕಾರದ (ಎಟಿಪಿಎಂಎಲ್‌ಎ) ಅಧ್ಯಕ್ಷ ಮತ್ತು ಸದಸ್ಯರ ಸ್ಥಾನವನ್ನು ಭರ್ತಿ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್‌.ಸುಭಾಷ್‌ ರೆಡ್ಡಿ ಮತ್ತು ಎಂ.ಆರ್‌.ಶಾ ಅವರಿದ್ದ ಪೀಠ, ಅರ್ಜಿದಾರರ ಪರ ಹಿರಿಯ ವಕೀಲ ಮಹಬಿರ್ ಸಿಂಗ್ ಅವರ ‘ಈ ಸ್ಥಾನಗಳು 2019ರಿಂದ ತೆರವಾಗಿವೆ’ ಎಂಬ ವಾದವನ್ನು ಪರಿಗಣಿಸಿತು.

ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದ್ದು, ನಾಲ್ಕು ವಾರಗಳ ಅವಧಿಯಲ್ಲಿ ಪ್ರತಿಕ್ರಿಯೆಯನ್ನು ದಾಖಲಿಸಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪೀಠ ಸೂಚಿಸಿತು. ವಕೀಲ, ಸಾಮಾಜಿಕ ಕಾರ್ಯಕರ್ತ ಅಮಿತ್‌ ಸಾಹ್ನಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪೀಠವು ವಿಚಾರಣೆ ನಡೆಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.