ADVERTISEMENT

ದ್ವೇಷ ಭಾಷಣ: ಕೇಂದ್ರ, ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 16:20 IST
Last Updated 20 ಅಕ್ಟೋಬರ್ 2022, 16:20 IST
ಸುಪ್ರೀಂ ಕೋರ್ಟ್ 
ಸುಪ್ರೀಂ ಕೋರ್ಟ್    

ನವದೆಹಲಿ: ಮುಸ್ಲಿಂ ಸಮುದಾಯದ ವಿರುದ್ಧದದ್ವೇಷಪೂರಿತ ಭಾಷಣಗಳನ್ನು ನಿಲ್ಲಿಸಲು ಸೂಕ್ತಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ. ರವಿ ಕುಮಾರ್ ನೇತೃತ್ವದ ನ್ಯಾಯಪೀಠವು, ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರಾದ ಶಾಹೀನ್ ಅಬ್ದುಲ್ಲಾ ಎಂಬುವವರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.