ADVERTISEMENT

ಕೋವಿಡ್–19: ಹಿರಿಯರಿಗೆ ಒದಗಿಸಿದ ಸೌಲಭ್ಯಗಳ ಬಗ್ಗೆ ರಾಜ್ಯಗಳ ವರದಿ ಕೇಳಿದ ಸುಪ್ರೀಂ

ಏಜೆನ್ಸೀಸ್
Published 7 ಸೆಪ್ಟೆಂಬರ್ 2020, 7:56 IST
Last Updated 7 ಸೆಪ್ಟೆಂಬರ್ 2020, 7:56 IST
ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)
ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)   

ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಒದಗಿಸಿದ ಸೌಲಭ್ಯಗಳ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೊರೊನಾ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ವೃದ್ಧರಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ವಿಸ್ತೃತ ವರದಿ ಸಲ್ಲಿಸಲುನಾಲ್ಕು ವಾರಗಳ ಗಡುವು ವಿಧಿಸಿದೆ.

‘ಹಿರಿಯ ನಾಗರಿಕರಿಗೆ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ರಾಜ್ಯಗಳು ಕೇವಲ ವರದಿ ಸಲ್ಲಿಸಿವೆಯಷ್ಟೆ. ಇಷ್ಟು ಮಾತ್ರ ಸಾಕಾಗುವುದಿಲ್ಲ. ಕೊರೊನಾದ ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಕಲ್ಯಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸೌಲಭ್ಯಗಳನ್ನು ಕಲ್ಪಿಸುವಂತೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರ, ಹಿರಿಯ ವಕೀಲ ಅಶ್ವನಿ ಕುಮಾರ್ ಮನವಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.