
ಪ್ರಜಾವಾಣಿ ವಾರ್ತೆ
ನವದೆಹಲಿ: ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸುವ ಸಾಮರ್ಥ್ಯ ಹೆಚ್ಚಿಸುವಂತೆ ನೀಡಿದ್ದ ನಿರ್ದೇಶನಗಳನ್ನು ಪಾಲನೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.
ಈ ವಿಚಾರವಾಗಿ ಅಸ್ಪಷ್ಟ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್,‘ನ್ಯಾಯಾಲಯದ ನಿರ್ದೇಶನಗಳನ್ನು ಕಾರ್ಯಗತಗೊಳಿಸುವ ಬದಲು ರಾಜ್ಯಗಳು ಕಾಲಹರಣ ಮಾಡುತ್ತಿವೆ’ ಎಂದು ಕಿಡಿಕಾರಿದೆ.
ನ್ಯಾಯಮೂರ್ತಿಗಳಾದ ವಿಕ್ರಮ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ.ಅಂಜಾರಿಯಾ ಅವರು ಇದ್ದ ನ್ಯಾಯಪೀಠವು, ವಿವಿಧ ರಾಜ್ಯಗಳ ನಿವೇದನೆಗಳನ್ನು ಆಲಿಸಿದ ಬಳಿಕ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.