ADVERTISEMENT

ಸಂಭಲ್‌ ಮಸೀದಿ ವಿವಾದ | ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್‌ ಆದೇಶ

ಪಿಟಿಐ
Published 22 ಆಗಸ್ಟ್ 2025, 15:29 IST
Last Updated 22 ಆಗಸ್ಟ್ 2025, 15:29 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಆಗಸ್ಟ್ 25ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದ್ದು, ಹಿಂದೂ ಅರ್ಜಿದಾರರಿಗೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠವು ಈ ಆದೇಶ ಹೊರಡಿಸಿದೆ. 

ಅಲಹಾಬಾದ್‌ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. 

ADVERTISEMENT

ಶಾಹಿ ಜಾಮಾ ಮಸೀದಿ ಮತ್ತು ಹರಿಹರ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆವರಣದಲ್ಲಿ ಸಮೀಕ್ಷೆ ಕೈಗೊಳ್ಳುವಂತೆ ಸಿವಿಲ್‌ ನ್ಯಾಯಾಲಯ ನಿರ್ದೇಶಿಸಿತ್ತು. ಸಮೀಕ್ಷೆಯನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.