ADVERTISEMENT

ಕೃಷಿ ಕಾನೂನು ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ: ಎನ್‌ಸಿಪಿ

ಪಿಟಿಐ
Published 12 ಜನವರಿ 2021, 9:57 IST
Last Updated 12 ಜನವರಿ 2021, 9:57 IST
ರೈತರ ಪ್ರತಿಭಟನೆ (ಪ್ರಾತಿನಿಧಿಕ ಚಿತ್ರ)
ರೈತರ ಪ್ರತಿಭಟನೆ (ಪ್ರಾತಿನಿಧಿಕ ಚಿತ್ರ)   

ಮುಂಬೈ: ಕೇಂದ್ರವು ರೂಪಿಸಿರುವ ಹೊಸ ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಹಿಡಿದಿರುವುದು ಸ್ವಾಗತಾರ್ಹ ಮತ್ತು ರೈತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯಾಗಿದೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮಂಗಳವಾರ ತಿಳಿಸಿದೆ.

ಮುಂದಿನ ಆದೇಶದವರೆಗೆ ಕೃಷಿ ಕಾಯ್ದೆಗಳ ಜಾರಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ದೆಹಲಿ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಿ ಬಿಕ್ಕಟ್ಟನ್ನು ಪರಿಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.

'ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ ಮತ್ತು ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಇದು ಸರಿಯಾದ ಕ್ರಮವಾಗಿದೆ. ಕೇಂದ್ರ ಸರ್ಕಾರವು ಈಗಲಾದರೂ ನಿಷ್ಠುರ ಕಾರ್ಯ ವಿಧಾನಗಳನ್ನು ನಿಲ್ಲಿಸಬೇಕು, ಅವರ ತಪ್ಪನ್ನು ಒಪ್ಪಿಕೊಂಡು ಸರಿ ಪಡಿಸಿಕೊಳ್ಳಬೇಕು' ಎಂದು ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.

ADVERTISEMENT

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯು ಕಾಂಗ್ರೆಸ್ ಜೊತೆಗೆ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಭಾಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.