ADVERTISEMENT

ಗೋವಾ ಕರ್ಲೀಸ್‌ ರೆಸ್ಟೋರೆಂಟ್‌ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ತಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2022, 6:39 IST
Last Updated 9 ಸೆಪ್ಟೆಂಬರ್ 2022, 6:39 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಗೋವಾದ ಅಂಜುನಾ ಪ್ರದೇಶದಲ್ಲಿರುವ ಕರ್ಲೀಸ್‌ ರೆಸ್ಟೋರೆಂಟ್‌ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ರೆಸ್ಟೋರೆಂಟ್‌ನಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂಬ ಷರತ್ತಿನೊಂದಿಗೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕರ್ಲೀಸ್‌ ರೆಸ್ಟೋರೆಂಟ್‌ ಕರಾವಳಿ ನಿಯಂತ್ರಣ ವಲಯ ನಿಯಮಗಳನ್ನು (ಸಿಆರ್‌ಝಡ್) ಉಲ್ಲಂಘಿಸಿದೆ ಎಂದು ಗೋವಾ ಸರ್ಕಾರ ಹೇಳಿತ್ತು. ಹೀಗಾಗಿ ಶುಕ್ರವಾರ ಬೆಳಿಗ್ಗೆ ರೆಸ್ಟೋರೆಂಟ್‌ ಅನ್ನು ಧ್ವಂಸಗೊಳಿಸುವ ಕಾರ್ಯಾಚರಣೆಗೆ ಮುಂದಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಉತ್ತರ ಗೋವಾದ ಪ್ರಸಿದ್ಧ ಅಂಜುನಾ ಬೀಚ್ ಬಳಿ ಇರುವ ಕರ್ಲೀಸ್‌ ರೆಸ್ಟೋರೆಂಟ್‌, ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್‌ ಸಾವಿನಿಂದ ಇತ್ತೀಚೆಗೆ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು.

ಸೋನಾಲಿ ಫೋಗಾಟ್‌ ಅವರಿಗೆ ರೆಸ್ಟೋರೆಂಟ್‌ನಲ್ಲಿ ಇತ್ತೀಚೆಗೆ ನಡೆದ ಪಾರ್ಟಿಯ ವೇಳೆ ಇಬ್ಬರು ಆರೋಪಿಗಳು ಮಾದಕ ವಸ್ತು ಬೆರೆಸಿದ ಪಾನೀಯ ನೀಡಿದ್ದರು. ಅದನ್ನು ಕುಡಿದಿದ್ದರಿಂದ, ಅವರ ಸಾವು ಸಂಭವಿಸಿತ್ತು ಎಂದು ಗೋವಾ ಪೊಲೀಸರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.