
ನವದೆಹಲಿ: ಪಶ್ಚಿಮ ಬಂಗಾಳದ ಹಿರಿಯ ನಾಯಕ ಮುಕುಲ್ ರಾಯ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದ ಕೋಲ್ಕತ್ತ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಹೈಕೋರ್ಟ್ 2025ರ ನವೆಂಬರ್ 13ರಂದು ನೀಡಿದ್ದ ತೀರ್ಪಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರ ಪೀಠ ತಡೆ ನೀಡಿತು. ಮುಕುಲ್ ರಾಯ್ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರ ಮಗ ಅರ್ಜಿ ಸಲ್ಲಿಸಿದ್ದಾರೆ.
ರಾಯ್ ಅವರ ಪಕ್ಷಾಂತರವನ್ನು ತೋರಿಸಲು ಸಲ್ಲಿಸಲಾದ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಸಾಕ್ಷ್ಯಕಾಯ್ದೆಯ ಸೆಕ್ಷನ್ 65ಬಿ ಅಡಿಯಲ್ಲಿ ದೃಢೀಕರಿಸಲಾಗಿಲ್ಲ ಎಂಬ ಕಾರಣಕ್ಕೆ ಸ್ಪೀಕರ್ ಅರ್ಜಿಯನ್ನು ಪರಿಗಣಿಸಿರಲಿಲ್ಲ. ಆದರೆ ಸ್ಪೀಕರ್ ಅವರ ಈ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ರಾಯ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿತ್ತು ಎಂದು ಅವರ ಪರ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.