ADVERTISEMENT

ಪೆಗಾಸಸ್ ಗೂಢಚರ್ಯೆ ಪ್ರಕರಣ: ಪ. ಬಂಗಾಳ ಆಯೋಗದ ವಿಚಾರಣೆಗೆ ‘ಸುಪ್ರೀಂ’ ತಡೆ

ಪಿಟಿಐ
Published 17 ಡಿಸೆಂಬರ್ 2021, 11:27 IST
Last Updated 17 ಡಿಸೆಂಬರ್ 2021, 11:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣದ ಆರೋಪಗಳ ತನಿಖೆಗಾಗಿ ಪಶ್ಚಿಮ ಬಂಗಾಳ ಸರ್ಕಾರವು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಂ.ಬಿ. ಲೋಕೂರ್ ನೇತೃತ್ವದ ಆಯೋಗದ ವಿಚಾರಣೆಗೆ ಶುಕ್ರವಾರ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು, ಲೋಕೂರ್ ಆಯೋಗವು ತನಿಖೆಯನ್ನು ನಡೆಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರವು ಭರವಸೆ ನೀಡಿದ್ದರೂ, ಆಯೋಗವು ತನ್ನ ಕಾರ್ಯವನ್ನು ಮುಂದುವರಿಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ಆಯೋಗದ ವಿಚಾರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠವು ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಲೋಬಲ್ ವಿಲೇಜ್ ಫೌಂಡೇಷನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಲೋಕೂರ್ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ADVERTISEMENT

ಭಾರತದಲ್ಲಿನ ಕೆಲವು ವ್ಯಕ್ತಿಗಳ ಮೇಲಿನ ಕಣ್ಗಾವಲಿಗಾಗಿ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಬಳಸುತ್ತಿರುವ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್‌.ವಿ. ರವೀಂದ್ರನ್ ಅವರ ನೇತೃತ್ವದಲ್ಲಿ ಮೂವರು ಸೈಬರ್ ತಜ್ಞರ ಸಮಿತಿಯನ್ನು ನೇಮಕ ಮಾಡಿ ನ್ಯಾಯಾಲಯವು ಅ. 27ರಂದು ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.