
ಸುಪ್ರೀಂ ಕೋರ್ಟ್ ಹಾಗೂ ಬೀದಿ ನಾಯಿಗಳು
ನವದೆಹಲಿ: ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರವೂ ವಿಚಾರಣೆ ಮುಂದುವರಿದಿದೆ. ನಾಯಿಗಳ ಕಡಿತದಿಂದ ಜನರಿಗೆ ಗಾಯ ಅಥವಾ ಸಾವು ಸಂಭವಿಸಿದರೆ, ರಾಜ್ಯ ಸರ್ಕಾರ ಭಾರಿ ಪರಿಹಾರವನ್ನು ನೀಡಬೇಕಾಗುತ್ತದೆ ಎಂದು ನ್ಯಾಯಾಧೀಶರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ.ಅಂಜಾರಿಯಾ ಅವರ ನೇತೃತ್ವದ ನ್ಯಾಯಪೀಠವು, ‘ಪ್ರತಿ ನಾಯಿ ಕಡಿತ, ಮಕ್ಕಳು ಅಥವಾ ವೃದ್ಧರಿಗೆ ಉಂಟಾಗುವ ಗಾಯ ಅಥವಾ ಸಾವು ಸಂಭವಿಸಿದರೆ, ರಾಜ್ಯವಾರು ಭಾರಿ ಪರಿಹಾರವನ್ನು ನಿಗದಿಪಡಿಸುವ ಸಾಧ್ಯತೆಯಿದೆ’ ಎಂದು ಹೇಳಿರುವುದಾಗಿ ‘ಲೈವ್‌ಲಾ’ ವರದಿ ಮಾಡಿದೆ.
ನಾವು ನಾಯಿಗಳಿಗೆ ಆಹಾರ ನೀಡುತ್ತಿದ್ದೇವೆ ಎಂದು ಹೇಳುವವರ ಅವುಗಳನ್ನು ನಿಮ್ಮ ಮನೆಗೆ ಕರೆದೊಯ್ಯಿರಿ. ನಾಯಿಗಳು ಏಕೆ ಕಚ್ಚಬೇಕು, ಜನರನ್ನು ಏಕೆ ಹೆದರಿಸಬೇಕು ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಪ್ರಶ್ನಿಸಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.