ADVERTISEMENT

ಅರಾವಳಿಗೆ ಕಂಟಕ: ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಡಿಸೆಂಬರ್ 2025, 2:38 IST
Last Updated 28 ಡಿಸೆಂಬರ್ 2025, 2:38 IST
<div class="paragraphs"><p>ಅರಾವಳಿ</p></div>

ಅರಾವಳಿ

   

ನವದೆಹಲಿ: ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂಬ ಕೇಂದ್ರ ಸರ್ಕಾರದ ವ್ಯಾಖ್ಯಾನದ ವಿರುದ್ಧ ಎದ್ದಿರುವ ಆಕ್ಷೇಪಗಳು ಹಾಗೂ ಪ್ರತಿಭಟನೆಗಳನ್ನು ಗಮನಿಸಿರುವ ಸುಪ್ರೀಂ ಕೋರ್ಟ್‌ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಾಗಿ ನಿನ್ನೆ ಹೇಳಿದೆ.

ಆಕ್ಷೇಪಗಳು ಕುರಿತು ಸ್ವಯಂ ಪ್ರೇರಿತ (ಸುಮೊಟೊ) ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಸುಮೊಟೊ ಕೇಸ್‌ ಅನ್ನು ನಾಳೆ ಬೆಳಿಗ್ಗೆ ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಹಾಗೂ ಆಗಸ್ಟಿನ್‌ ಜಾರ್ಜ್‌ ಅವರ ನೇತೃತ್ವದ ರಜಾಕಾಲದ ಪೀಠ ವಿಚಾರಣೆ ನಡೆಸಲಿದೆ. ಈ ಬಗ್ಗೆ ಅರಾವರಳಿ ಪರ ಹೋರಾಟಗಾರರ ತೀವ್ರ ಕುತೂಹಲ ಮೂಡಿದೆ.

ಅರಣ್ಯ ಸಂರಕ್ಷಣಾ ನಿಯಮಗಳ (2022) ತಿದ್ದುಪಡಿ ಪ್ರಕಾರ ‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂಬ ಕೇಂದ್ರ ಸರ್ಕಾರದ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್‌ ಅನುಮೋದನೆ ನೀಡಿತ್ತು. ಈ ನಿರ್ಧಾರವನ್ನು ಖಂಡಿಸಿ ರಾಜಸ್ತಾನ ಮತ್ತು ಹರಿಯಾಣ ಸೇರಿದಂತೆ ದೇಶದ ಅನೇಕ ಕಡೆ ವ್ಯಾಪಕ ಪ್ರತಿಭಟನೆಗಳು ಆರಂಭಗೊಂಡಿವೆ.

ನಾಳೆ ನಡೆಯುವ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ತನ್ನದೇ ನಿರ್ಧಾರವನ್ನು ಪುನರ್‌ ಪರಿಶೀಲಿಸಬಹುದು ಎನ್ನಲಾಗಿದೆ. ಈ ಕುರಿತು ಲೈವ್‌ ಲಾ ವರದಿ ಮಾಡಿದೆ

ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆಯುತ್ತಿವೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಸರ ಕಾರ್ಯಕರ್ತರು, ಸಾಮಾಜಿಕ ಸಂಘಟನೆಗಳ ಸದಸ್ಯರು, ವಕೀಲರು ಮತ್ತು ಸ್ಥಳೀಯರು ಭಾಗವಹಿಸುತ್ತಿದ್ದಾರೆ. ಅರಾವಳಿ ಶ್ರೇಣಿಗಳ ಬಗ್ಗೆ ಕೇಂದ್ರದ ಹೊಸ ವ್ಯಾಖ್ಯಾನವು ಪರಿಸರ ಸಮತೋಲನಕ್ಕೆ ಹಾನಿಕಾರಕವೆಂದು ಪರಿಸರ ಹೋರಾಟಗಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.