ADVERTISEMENT

ಆಗಸ್ಟ್‌ 1ಕ್ಕೆ ಉದ್ಧವ್‌ ಬಣದ ಅರ್ಜಿ ವಿಚಾರಣೆ: ‘ಸುಪ್ರೀಂ’

ಪಿಟಿಐ
Published 26 ಜುಲೈ 2022, 10:34 IST
Last Updated 26 ಜುಲೈ 2022, 10:34 IST
supreme court
supreme court   

ನವದೆಹಲಿ:ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣವನ್ನು ನೈಜ ಶಿವಸೇನಾ ಎಂದು ಗುರುತಿಸುವ ಭಾರತೀಯ ಚುನಾವಣಾ ಆಯೋಗದ ಪ್ರಕ್ರಿಯೆಗೆ ತಡೆಯೊಡ್ಡಬೇಕೆಂದು ಕೋರಿಶಿವಸೇನಾ ಮುಖ್ಯಸ್ಥ ಉದ್ಧವ್ಠಾಕ್ರೆ ಬಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ 1ಕ್ಕೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಅರ್ಜಿಯ ವಿಚಾರಣೆಯನ್ನು ಶೀಘ್ರವೇ ನಡೆಸಬೇಕೆಂದು ಉದ್ಧವ್‌ ಬಣದ ಪರ ವಕೀಲ ಕಪಿಲ್‌ ಸಿಬಲ್‌ ಅವರುಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದರು. ಅವರ ಮನವಿ ಪುರಸ್ಕರಿಸಿದ ಪೀಠವುಉದ್ಧವ್‌ ಬಣದ ಅರ್ಜಿ ಹಾಗೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ 1ರಂದು ನಡೆಸಲು ಒಪ್ಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.