ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೇ ತಿಂಗಳ 20ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಅರ್ಜಿಯ ವಿಚಾರಣೆ ನಡೆಸಬೇಕಿತ್ತು. ದಾಖಲೆಯೊಂದು ಲಭ್ಯವಿಲ್ಲದ ಕಾರಣ ಪೀಠವು ವಿಚಾರಣೆಯನ್ನು ಮುಂದೂಡಿತು.
ವಿವಿಧ ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿಮಲ್ಯ ಅಂದಾಜು ₹299 ಕೋಟಿ ಹಣವನ್ನು ತಮ್ಮ ಮಕ್ಕಳಿಗೆ ಅಕ್ರಮವಾಗಿ ವರ್ಗಾಯಿಸಿದ್ದಾರೆ ಎಂದು ವಿವಿಧ ಬ್ಯಾಂಕುಗಳು ದೂರಿದ್ದವು. ನ್ಯಾಯಾಂಗ ನಿಂದನೆ ಪ್ರಕರಣದ ಅಡಿಯಲ್ಲಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಜೊತೆಗೆ ಮಕ್ಕಳ ಖಾತೆಗೆ ವರ್ಗಾಯಿಸಿರುವ ಹಣವನ್ನು ಹಿಂದಕ್ಕೆ ಪಡೆಯಬೇಕೆಂದು ಮನವಿ ಮಾಡಿದ್ದವು.
ಆ ವರ್ಷದ ಮೇ ತಿಂಗಳಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮಲ್ಯ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಇದರ ವಿರುದ್ಧ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.