ಸುಪ್ರೀಂ ಕೋರ್ಟ್
ನವದೆಹಲಿ: ಮಥುರಾದ ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿ ಶಾಹಿ ಮಸೀದಿ ವ್ಯವಸ್ಥಾಪಕ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಡಿ.9ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
‘ಸಮಿತಿ ಸಲ್ಲಿಸಿರುವ ಮೇಲ್ಮನವಿ ಕುರಿತು ಡಿ.9ರಂದು ಮಧ್ಯಾಹ್ನ 2ಕ್ಕೆ ಸುದೀರ್ಘ ವಿಚಾರಣೆ ನಡೆಸಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇದ್ದ ನ್ಯಾಯಪೀಠ ಹೇಳಿದೆ.
‘ನಿಮ್ಮ ವಾದ ಮಂಡನೆಗೆ ಖಂಡಿತವಾಗಿಯೂ ಅವಕಾಶ ನೀಡುತ್ತೇವೆ’ ಎಂದು ಸಮಿತಿ ಪರ ವಕೀಲರನ್ನು ಉದ್ದೇಶಿಸಿ ಸಿಜೆಐ ಖನ್ನಾ ಹೇಳಿದರು.
ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿ ಸಲ್ಲಿಸಲಾಗಿರುವ 18 ಅರ್ಜಿಗಳು ಸಮರ್ಥನೀಯವಲ್ಲ ಎಂದು ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿ ಅಲಹಾಬಾದ್ ಹೈಕೋರ್ಟ್ ಆಗಸ್ಟ್ 1ರಂದು ಆದೇಶಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.