ಎಕ್ಸ್ ಖಾತೆ: X/@careers360
ನವದೆಹಲಿ: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜಾಲತಾಣದಲ್ಲಿ ಪೋಸ್ಟ್ ಹಾಕಿದಕ್ಕಾಗಿ ಬಂಧಿಸಿರುವುದನ್ನು ಪ್ರಶ್ನಿಸಿ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಲಿ ಖಾನ್ ಮಹಮೂದಾಬಾದ್ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.
ಅಲಿ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು, ಅರ್ಜಿಯನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿತು.
ಪ್ರಕರಣ ಸಂಬಂಧ ಅಲಿ ಅವರನ್ನು ಭಾನುವಾರ ಬಂಧಿಸಲಾಗಿದೆ.
ಅಲಿ ಅವರ ಹೇಳಿಕೆಯನ್ನು ಪ್ರಶ್ನಿಸಿ ಹರಿಯಾಣ ರಾಜ್ಯ ಮಹಿಳಾ ಆಯೋಗ ಇತ್ತೀಚೆಗೆ ಅವರಿಗೆ ನೋಟಿಸ್ ನೀಡಿತ್ತು. ಆದರೆ, ಆಯೋಗವು ತಮ್ಮ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಂಡಿದೆ ಎಂದು ಅಲಿ ಅವರು ಸಮರ್ಥಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.