ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಈ ಕುರಿತು ವಿಚಾರಣೆ ನಡೆಸುವ ಮೂಲಕ ಶನಿವಾರ ನಡೆಯಲಿರುವ ದೆಹಲಿ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ ಎಂದೂ ತಿಳಿಸಿದೆ.
‘ಶಾಹೀನ್ ಬಾಗ್‌ನಲ್ಲಿ ಸಮಸ್ಯೆ ಇದೆ ಎಂಬುದನ್ನು ನಾವು ಅರ್ಥೈಸಿಕೊಂಡಿದ್ದೇವೆ. ಅದನ್ನು ಹೇಗೆ ಪರಿಹರಿಸಬೇಕು ಎಂಬುದರ ಬಗ್ಗೆ ಚಿಂತಿಸಬೇಕಾಗಿದೆ’ ಎಂದೂ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.