ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ–2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.
ಪ್ರಕರಣ ಸಂಬಂಧ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು ಮೇ 20ಕ್ಕೆ ವಿಚಾರಣೆ ನಡೆಸುವುದಾಗಿ ಮೇ 15ರಂದು ತಿಳಿಸಿತ್ತು.
ಇದೇ ಸಂದರ್ಭದಲ್ಲಿ ಕೋರ್ಟ್‌ಗಳು ಘೋಷಿಸಿರುವ ವಕ್ಫ್ ಆಸ್ತಿಗಳು, ಬಳಕೆ ಕಾರಣದಿಂದ ವಕ್ಫ್ ಆಸ್ತಿ ಮತ್ತು ಕ್ರಯಪತ್ರದ ಮೂಲಕ ಘೋಷಿಸಲಾದ ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವ ಅಧಿಕಾರಕ್ಕೆ ಸಂಬಂಧಿಸಿದಂತೆ ವಾದಪ್ರತಿವಾದ ಆಲಿಸಿದ ನಂತರ ಮಧ್ಯಂತರ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.