ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಮೊದಲ ಮಹಿಳಾ ಕುಲಪತಿಯಾಗಿ ಪ್ರೊ. ನೈಮಾ ಖಾತೂನ್ ಅವರ ನೇಮಕಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನೈಮಾ ನೇಮಕವನ್ನು ಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ‍್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯಿ ಅವರಿದ್ದ ಪೀಠವು ವಜಾಗೊಳಿಸಿತು.
ಎಎಂಯು ವಿ.ವಿ.ಯ ಕುಲಪತಿಯಾಗಿ ಪ್ರೊ. ನೈಮಾ ಅವರು 2024ರ ಏ. 22ರಂದು ಅಧಿಕಾರ ವಹಿಸಿಕೊಂಡಿದ್ದರು.
ಕುಲಪತಿ ಆಯ್ಕೆಯ ಶೋಧನಾ ಸಮಿತಿಯಲ್ಲಿ ನೈಮಾ ಅವರ ಪತಿ ಪ್ರೊ. ಮೊಹ್ದ್ ಗುಲ್ರೆಜ್ ಇದ್ದರು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಪೀಠದ ಗಮನ ಸೆಳೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.