ADVERTISEMENT

ಮೀಸಲಾತಿ | ಸುಪ್ರೀಂ ಕೋರ್ಟ್ ತೀರ್ಪು: ಕೇಂದ್ರ ಮಧ್ಯಪ್ರವೇಶಕ್ಕೆ ಒತ್ತಾಯ

ಏಜೆನ್ಸೀಸ್
Published 10 ಫೆಬ್ರುವರಿ 2020, 7:57 IST
Last Updated 10 ಫೆಬ್ರುವರಿ 2020, 7:57 IST
ಸಮಾಜ ಕಲ್ಯಾಣಸಚಿವರು ಸದ್ಯದಲ್ಲೇ ಉತ್ತರ ನೀಡಲಿದ್ದಾರೆ ಎಂದು ಸಚಿವ ರಾಜನಾಥಸಿಂಗ್ ಹೇಳಿದ್ದಾರೆ.
ಸಮಾಜ ಕಲ್ಯಾಣಸಚಿವರು ಸದ್ಯದಲ್ಲೇ ಉತ್ತರ ನೀಡಲಿದ್ದಾರೆ ಎಂದು ಸಚಿವ ರಾಜನಾಥಸಿಂಗ್ ಹೇಳಿದ್ದಾರೆ.   

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬಡ್ತಿ, ಉದ್ಯೋಗಕ್ಕೆ ಸಂಬಂಧಿಸಿದ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದಿರುವ ಸುಪ್ರೀಂಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಮಧ್ಯಪ್ರವೇಶಿಸಬೇಕೆಂದು ಲೋಕಜನಶಕ್ತಿ ಮುಖಂಡ ಸಂಸದ ಚಿರಾಗ್ ಪಾಸ್ವಾನ್ ಒತ್ತಾಯಿಸಿದ್ದಾರೆ.

ಸೋಮವಾರ ಆರಂಭವಾದ ಸಂಸತ್ತಿನ ಅಧಿವೇಶನದಲ್ಲಿ ಪಾಲ್ಗೊಂಡ ಸಂಸದ ಚಿರಾಗ್, ಕೇಂದ್ರ ಸರ್ಕಾರದ ಗಮನ ಸೆಳೆದು, ಈ ತೀರ್ಪಿಗೆ ಪಕ್ಷದ ಸಹಮತ ಇಲ್ಲ. ಕೇಂದ್ರ ಮಧ್ಯಪ್ರವೇಶಿಸಿ ಈ ಕುರಿತು ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಅಪ್ನಾದಳ್ ಪಕ್ಷದ ಸಂಸದೆ ಅನುಪ್ರಿಯಾ ಪಟೇಲ್ ಕೂಡ ತಮ್ಮ ಸಹಮತ ವ್ಯಕ್ತಪಡಿಸಿ, ತಮ್ಮ ಪಕ್ಷದ ಸಹಮತ ಇಲ್ಲ, ಸುಪ್ರೀಂ ಕೋರ್ಟ್ ತೀರ್ಪು ದುರದೃಷ್ಟಕರ ಎಂದು ಹೇಳಿದ್ದಾರೆ.

ADVERTISEMENT

ಅಧಿವೇಶನದಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡವು. ಈ ಸಮಯದಲ್ಲಿ ಮಧ್ಯಪ್ರವೇಶಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮಾಜಕಲ್ಯಾಣ ಸಚಿವರು ಈ ಸಂಬಂಧ ಹೇಳಿಕೆ ನೀಡುತ್ತಾರೆ. ಅಲ್ಲಿಯವರೆಗೂ ವಿರೋಧ ಪಕ್ಷಗಳು ಕಾಯಬೇಕು. ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.