ADVERTISEMENT

ಸುಪ್ರೀಂ ಕೋರ್ಟ್‌ ಬಗ್ಗೆ ಉಪರಾಷ್ಟ್ರಪತಿ ಧನಕರ್ ಹೇಳಿಕೆಗೆ ಡಿಎಂಕೆ ಟೀಕೆ

ಪಿಟಿಐ
Published 18 ಏಪ್ರಿಲ್ 2025, 5:51 IST
Last Updated 18 ಏಪ್ರಿಲ್ 2025, 5:51 IST
ಜಗದೀಪ್ ಧನಕರ್
ಜಗದೀಪ್ ಧನಕರ್   

ಚೆನ್ನೈ: ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರಿಂ ಕೋರ್ಟ್‌ನ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಜಗದೀ‍ಪ್ ಧನಕರ್ ಅವರನ್ನು ತಮಿಳುನಾಡು ಆಡಳಿತಾರೂಢ ಡಿಎಂಕೆ ಟೀಕಿಸಿದೆ. ತೀರ್ಪಿನ ಬಗ್ಗೆ ಅವರ ಹೇಳಿಕೆ ‘ಅನೈತಿಕ’ ಎಂದು ಹೇಳಿದೆ.

‘ಸಂವಿಧಾನದ ಅಧಿಕಾರ ಹಂಚಿಕೆಯಡಿ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗವು ವಿಭಿನ್ನ ಅಧಿಕಾರಗಳನ್ನು ಹೊಂದಿವೆ’ ಎಂದು ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಜ್ಯಸಭಾ ಸದಸ್ಯ ತಿರುಚಿ ಶಿವ ಹೇಳಿದ್ದಾರೆ.

‘ಮೂವರೂ ತಮ್ಮದೇ ಆದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವಾಗ ಸಂವಿಧಾನವು ಸರ್ವೋಚ್ಚ ಎನ್ನುವುದನ್ನು ಮರೆಯಬಾರದು. ಸಂವಿಧಾನದ 142ನೇ ವಿಧಿಯಡಿ ಇರುವ ಅಧಿಕಾರ ಚಲಾಯಿಸುವ ಮೂಲಕ ಸುಪ್ರೀಂ ಕೋರ್ಟ್, ಯಾವುದೇ ವ್ಯಕ್ತಿ ಸಾಂವಿಧಾನಿಕ ಅಧಿಕಾರದ ಹೆಸರಿನಲ್ಲಿ ಶಾಸಕಾಂಗವು ಅಂಗೀಕರಿಸಿದ ಮಸೂದೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಸ್ಥಾಪಿಸಿದೆ’ ಎಂದು ಅವರು ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

ADVERTISEMENT

‘ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅಭಿಪ್ರಾಯಗಳು ಅನೈತಿಕವಾಗಿದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನಿನ ನಿಯಮವೇ ಮೇಲು ಎಂದು ಪ್ರತಿಯೊಬ್ಬ ನಾಗರಿಕನೂ ತಿಳಿದಿರಬೇಕು’ ಎಂದು ಹೇಳಿದ್ದಾರೆ.

ಧನಕರ್ ಹೇಳಿದ್ದೇನು?

ರಾಷ್ಟ್ರಪತಿಗೆ ಕಾಲಮಿತಿ ನಿಗದಿ ಮಾಡಿರುವ ಕ್ರಮವನ್ನು, ಸಂಸತ್ತಿಗೂ ಮಿಗಿಲಾಗಿರುವ ವರ್ತನೆ ಎಂದು ಧನಕರ್‌ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಜಾತಾಂತ್ರಿಕ ಶಕ್ತಿಗಳನ್ನು ಗುರಿಯಾಗಿಸಿಕೊಂಡು ಸುಪ್ರೀಂ ಕೋರ್ಟ್‌ ‘ಅಣ್ವಸ್ತ್ರ ಕ್ಷಿಪಣಿ’ ಪ್ರಯೋಗಿಸುವಂತಿಲ್ಲ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.