ADVERTISEMENT

ನೂಪುರ್ ಶರ್ಮಾ ಫೋಟೊ ಅಪ್‌ಲೋಡ್ ಮಾಡಿದ ಉದ್ಯಮಿಗೆ ಕೊಲೆ ಬೆದರಿಕೆ; ಮೂವರ ಬಂಧನ

ಪಿಟಿಐ
Published 16 ಜುಲೈ 2022, 2:24 IST
Last Updated 16 ಜುಲೈ 2022, 2:24 IST
ನೂಪುರ್ ಶರ್ಮಾ
ನೂಪುರ್ ಶರ್ಮಾ   

ಸೂರತ್: ಬಿಜೆಪಿಯಿಂದ ಅಮಾನತುಗೊಂಡಿರುವ ನಾಯಕಿ ನೂಪುರ್ ಶರ್ಮಾ ಅವರ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದಉದ್ಯಮಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಗುಜರಾತ್‌ನ ಸೂರತ್‌ನಲ್ಲಿಶುಕ್ರವಾರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್ ನಡೆಸುತ್ತಿರುವ ಉದ್ಯಮಿ, ಪಾರ್ಕ್‌ನ ಇನ್‌ಸ್ಟಾಗ್ರಾಂ ಪುಟದಲ್ಲಿ ನೂಪುರ್ ಶರ್ಮಾ ಅವರ ಫೋಟೊ ಅಪ್‌ಲೋಡ್ ಮಾಡಿದ್ದರು. ಇದಾದ ಬೆನ್ನಲ್ಲೇ ಏಳು ಮಂದಿಯಿಂದ ಕೊಲೆ ಬೆದರಿಕೆ ಬಂದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ನೂಪುರ್ ಶರ್ಮಾ ಫೋಟೊ ಹಾಕಿದ ಉದ್ಯಮಿ, ಬಳಿಕ ಡಿಲೀಟ್ ಮಾಡಿ ಕ್ಷಮೆಯಾಚಿಸಿದ್ದರು.

ಈ ಸಂಬಂಧ ಭಾರತ ದಂಡ ಸಂಹಿತೆಯ ಸೆಕ್ಷನ್ 504, 506, 507 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇತರೆ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಉಮ್ರಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೆ.ಆರ್. ಚೌಧರಿ ತಿಳಿಸಿದ್ದಾರೆ.

ಬಂಧಿತರನ್ನು ಸೂರತ್ ಮೂಲದ ಮೊಹಮ್ಮದ್ ಅಯಾನ್ ಅತಾಶ್‌ಬಾಜಿವಾಲಾ, ರಶೀದ್ ಬುರಾ, ಅಲಿಯಾ ಮೊಹಮ್ಮದ್ ಎಂದು ಗುರುತಿಸಲಾಗಿದೆ.

ನೂಪುರ್ ಶರ್ಮಾ, ಖಾಸಗಿ ಟಿ.ವಿ ಕಾರ್ಯಕ್ರಮದಲ್ಲಿ ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.