ADVERTISEMENT

ಸಿವಿಸಿ ಮುಖ್ಯಸ್ಥರಾಗಿ ಸುರೇಶ್‌ ಎನ್‌. ಪಟೇಲ್‌ ನೇಮಕ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 15:43 IST
Last Updated 3 ಆಗಸ್ಟ್ 2022, 15:43 IST
ಕೇಂದ್ರ ಜಾಗೃತ ಆಯೋಗದ ಆಯುಕ್ತರಾಗಿ ಸುರೇಶ್‌ ಎನ್‌. ಪಟೇಲ್‌ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಇದ್ದರು  –ಪಿಟಿಐ ಚಿತ್ರ

ನವದೆಹಲಿ: ಕೇಂದ್ರ ಜಾಗೃತ ಆಯೋಗದ (ಸಿವಿಸಿ) ಮುಖ್ಯಸ್ಥರಾಗಿ ಸುರೇಶ್‌ ಎನ್‌. ಪಟೇಲ್‌ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.

ರಾಷ್ಟ್ರಪತಿ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಪಟೇಲ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.

ಖಾಲಿ ಇದ್ದ ಸಿವಿಸಿ ಮುಖ್ಯಸ್ಥರ ಹುದ್ದೆಯಲ್ಲಿ ಕಳೆದ ಜೂನ್‌ನಿಂದ ಪಟೇಲ್‌ ಅವರು ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ವೇಳೆ ಸಿವಿಸಿ ಇನ್ನಿಬ್ಬರು ಆಯುಕ್ತರಾಗಿ ಅಸ್ಸಾಂ– ಮೇಘಾಲಯ ಕೇಡರ್‌ನ ನಿವೃತ್ತ ಐಪಿಎಸ್‌ ಅಧಿಕಾರಿ ಅರವಿಂದ್‌ ಕುಮಾರ್‌ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಪ್ರವೀಣ್‌ ಕುಮಾರ್‌ ಶ್ರಿವಾಸ್ತವ ಅವರು ಅಧಿಕಾರ ವಹಿಸಿಕೊಂಡರು.

ADVERTISEMENT

ಅರವಿಂದ್‌ ಕುಮಾರ್‌ ಅವರು ಐ.ಬಿಯ (ಗುಪ್ತದಳ) ಮಾಜಿ ಮುಖ್ಯಸ್ಥರು. ಶ್ರೀವಾಸ್ತವ ಅವರು ಕೇಂದ್ರ ಸಂಪುಟ ಸಚಿವಾಲಯದ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.