ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ: ನ್ಯಾಯಾಂಗ ತನಿಖೆಗೆ ‘ಕೈ’ ಆಗ್ರಹ

ಪಿಟಿಐ
Published 15 ಜೂನ್ 2025, 13:50 IST
Last Updated 15 ಜೂನ್ 2025, 13:50 IST
ರಣದೀಪ್‌ ಸಿಂಗ್ ಸುರ್ಜೆವಾಲಾ
ರಣದೀಪ್‌ ಸಿಂಗ್ ಸುರ್ಜೆವಾಲಾ   

ಚಂಡೀಗಢ: ‘ಹರಿಯಾಣ ಲೋಕಸೇವಾ ಆಯೋಗ (ಎಚ್‌ಪಿಎಸ್‌ಸಿ) ಮೂಲಕ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು’ ಎಂದು ಕಾಂಗ್ರೆಸ್‌ ನಾಯಕ ರಣದೀಪ್‌ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

‘ಎಚ್‌ಪಿಎಸ್‌ಸಿ ಅನ್ನು ವಜಾ ಮಾಡಬೇಕು. ಪ್ರಶ್ನೆಪತ್ರಿಕೆ ರಚನೆ ಸೇರಿದಂತೆ ಇಡೀ ನೇಮಕಾತಿ ಪ್ರಕ್ರಿಯೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಮತ್ತೊಮ್ಮೆ ನೇಮಕಾತಿ ಪ‍ರೀಕ್ಷೆ ನಡೆಸಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಈ ಆರೋಪ ಕುರಿತಂತೆ ಹರಿಯಾಣ ಲೋಕಸೇವಾ ಆಯೋಗವು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.