ADVERTISEMENT

ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ಅಚ್ಚರಿ ತಂದಿದೆ: ಪವಾರ್

ಪಿಟಿಐ
Published 8 ಮೇ 2023, 4:24 IST
Last Updated 8 ಮೇ 2023, 4:24 IST
   

ಮುಂಬೈ: ಕರ್ನಾಟಕದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ. ಅದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಪವಾರ್ ಸ್ಥಳೀಯ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಪಂಢರಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ADVERTISEMENT

‘ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಯ ರಕ್ಷಣೆಗಾಗಿ ಪ್ರಮಾಣ ವಚನ ಸ್ವೀಕರಿಸಿರುತ್ತೇವೆ’ಎಂದು ಪವಾರ್ ಟಿವಿ9 ಮರಾಠಿಗೆ ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಧಾರ್ಮಿಕ ಘೋಷಣೆಗಳನ್ನು ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಚಾರವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ’ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.