ಪಣಜಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಡ್ರಗ್ ಪ್ರಕರಣದಲ್ಲಿ ಆರೋಪಿಗಳ ಜೊತೆ ಸಂಬಂಧ ಹೊಂದಿದ ಆರೋಪದಲ್ಲಿ ಗೋವಾ ಮೂಲದ ಡ್ರಗ್ ಪೆಡ್ಲರ್ ಹೇಮಂತ್ ಸಾಹ ಎಂಬಾತನನ್ನು ಮಾದಕ ವಸ್ತುಗಳ ನಿಯಂತ್ರಣ ಘಟಕ (ಎನ್‌ಸಿಬಿ) ಸೋಮವಾರ ಬಂಧಿಸಿದೆ.
ಉತ್ತರ ಗೋವಾದ ಮೊರ್ಜಿಮ್‌ನಲ್ಲಿನ ಆರೋಪಿ ಹೇಮಂತ್‌ನ ಮನೆ ಮೇಲೆ ದಾಳಿ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಎಲ್‌ಎಸ್‌ಡಿ ಹಾಗೂ 30 ಗ್ರಾಂ ಚರಾಸ್ ಎಂಬ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎನ್‌ಸಿಬಿಯ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಾರಾಂತ್ಯದಲ್ಲಿ ಗೋವಾದಲ್ಲಿ ನಡೆದ ಸರಣಿ ತನಿಖೆಯ ಭಾಗವಾಗಿ ಈ ದಾಳಿ ನಡೆದಿದೆ.
ಡ್ರಗ್ ಪ್ರಕರಣದಲ್ಲಿ ಆರೋಪಿಗಳಾದ ಅನುಜ್ ಕೇಸ್ವಾನಿ ಹಾಗೂ ರೇಗಲ್ ಮಹಾಕಾಳ್ ಎಂಬವರು ಪೊಲೀಸರ ತನಿಖೆ ಸಂದರ್ಭದಲ್ಲಿ ಸಾಹ ಹೆಸರನ್ನು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.