ADVERTISEMENT

ಸುಶಾಂತ್ ಸಿಂಗ್ ಸಾವು ಪ್ರಕರಣ: ಸಹಾಯಕ ನಿರ್ದೇಶಕ ರಿಷಿಕೇಶ್ ಪವಾರ್ ಬಂಧನ

ಪಿಟಿಐ
Published 2 ಫೆಬ್ರುವರಿ 2021, 10:26 IST
Last Updated 2 ಫೆಬ್ರುವರಿ 2021, 10:26 IST
ಸುಶಾಂತ್ ಸಿಂಗ್ ರಜಪೂತ್
ಸುಶಾಂತ್ ಸಿಂಗ್ ರಜಪೂತ್   

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಡಿ ಸಹಾಯಕ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಮಂಗಳವಾರ ಬಂಧಿಸಿದೆ.

‘ಈ ಹಿಂದೆ ಎನ್‌ಸಿಬಿಯುರಿಷಿಕೇಶ್‌ ಪವಾರ್‌ಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಇದೀಗ ಅವರನ್ನು ಎನ್‌ಸಿಬಿಯ ಮುಂಬೈ ವಿಭಾಗದ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ಇದಕ್ಕೂ ಮುನ್ನ ರಿಷಿಕೇಶ್‌ ಮನೆಯಲ್ಲಿ ಎನ್‌ಸಿಬಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಅಧಿಕಾರಿಗಳು ಕೆಲವೊಂದು ಗ್ಯಾಜೆಟ್‌ಗಳನ್ನು ವಶಕ್ಕೆ ಪಡೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.