ADVERTISEMENT

ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ, ರಕುಲ್‌ಗೆ ಎನ್‌ಸಿಬಿ ಸಮನ್ಸ್‌

ನಟ ಸುಶಾಂತ್‌ಸಿಂಗ್ ಸಾವು, ಡ್ರಗ್ಸ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 14:02 IST
Last Updated 23 ಸೆಪ್ಟೆಂಬರ್ 2020, 14:02 IST
ಶ್ರದ್ಧಾ ಕಪೂರ್‌
ಶ್ರದ್ಧಾ ಕಪೂರ್‌   

ಮುಂಬೈ:ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದ ಡ್ರಗ್ಸ್‌ ಪ್ರಕರಣ ಕುರಿತ ತನಿಖೆಯನ್ನು ತೀವ್ರಗೊಳಿಸಿರುವ ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ), ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಹಾಗೂ ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಬುಧವಾರ ಸಮನ್ಸ್‌ ಜಾರಿ ಮಾಡಿದೆ.

ಈ ನಟಿಯರಿಗೆ ಸಮನ್ಸ್‌ ಜಾರಿ ಮಾಡಿರುವುದನ್ನು ಎನ್‌ಸಿಬಿಯ ಉಪನಿರ್ದೇಶಕ (ಕಾರ್ಯಾಚರಣೆ) ಕೆ.ಪಿ.ಎಸ್‌.ಮಲ್ಹೋತ್ರಾ ಖಚಿತಪಡಿಸಿದ್ದಾರೆ. ಆದರೆ, ಯಾವ ದಿನ ಇವರು ಎನ್‌ಸಿಬಿಯ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗಾಗಿ ಹಾಜರಾಗಬೇಕು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸುಶಾಂತ್‌ ಸಿಂಗ್‌ ಗೆಳತಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿ, ಜಯಾ ಸಹಾ ಹಾಗೂ ಕೆಲವು ಡ್ರಗ್ಸ್‌ ಪೆಡ್ಲರ್‌ಗಳು ಸೇರಿದಂತೆ 10ಕ್ಕೂ ಜನರನ್ನು ವಿಚಾರಣೆಗೆ ಒಳಪಡಿಸಿದ ಸಮಯದಲ್ಲಿ ಅವರು, ಈ ನಾಲ್ವರು ನಟಿಯರ ಹೆಸರುಗಳನ್ನು ಬಾಯ್ಬಿಟ್ಟಿದ್ದಾರೆ. ಇದೇ ಆಧಾರದಲ್ಲಿ ಅವರಿಗೆ ಸಮನ್ಸ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.