ADVERTISEMENT

ಸುಶಾಂತ್‌ ಆತ್ಮಹತ್ಯೆ: ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ತಂದೆ ಪೊಲೀಸರಿಗೆ ದೂರು

ಏಜೆನ್ಸೀಸ್
Published 28 ಜುಲೈ 2020, 14:23 IST
Last Updated 28 ಜುಲೈ 2020, 14:23 IST
ಸುಶಾಂತ್‌ ಮತ್ತು ರಿಯಾ
ಸುಶಾಂತ್‌ ಮತ್ತು ರಿಯಾ   

ಪಟ್ನಾ: ಬಾಲಿವುಡ್‌ ಯುವ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಿಯಾ ಚಕ್ರವರ್ತಿ ಅವರೇ ಸುಶಾಂತ್ ಆತ್ಮಹತ್ಯೆಗೆ ಕಾರಣ ಎಂದು ಸುಶಾಂತ್‌ ಕುಟುಂಬದವರು ಆರೋಪಿಸಿದ್ದಾರೆ.

ರಿಯಾ ಚಕ್ರವರ್ತಿ ಹಣಕಾಸು ವಿಚಾರದಲ್ಲಿ ಸುಶಾಂತ್‌ಗೆ ಮೋಸ ಮಾಡಿದ್ದಾರೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಕಾರಣಕ್ಕೆ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್‌ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ ತಿಂಗಳು ಸುಶಾಂತ್ ಸಿಂಗ್ ರಜಪೂತ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸುಶಾಂತ್‌ಆತ್ಮಹತ್ಯೆಗೆ ಪ್ರಚೋಧಿಸಲಾಗಿದೆ ಎಂಬ ಚರ್ಚೆಗಳು ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.