

ಬಾನ್ಸುರಿ ಸ್ವರಾಜ್, ಸುಷ್ಮಾ ಸ್ವರಾಜ್
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ವಿದೇಶಾಂಗ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ಗೆ ಬಿಜೆಪಿ ನವದೆಹಲಿಯಿಂದ ಟಿಕೆಟ್ ಘೋಷಣೆ ಮಾಡಿದೆ.
ಶನಿವಾರ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಬಾನ್ಸುರಿ ಸ್ವರಾಜ್ ಅವರ ಹೆಸರು ಕೂಡ ಸೇರಿದೆ. ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಬಾನ್ಸುರಿ ಸ್ವರಾಜ್ ವೃತ್ತಿಯಲ್ಲಿ ವಕೀಲೆಯಾಗಿದ್ದಾರೆ. ಕಳೆದ ವರ್ಷ ದೆಹಲಿ ಬಿಜೆಪಿಯು ಅವರನ್ನು ಬಿಜೆಪಿ ಕಾನೂನು ಕೋಶದ ಸಹ-ಸಂಚಾಲಕರಾಗಿ ನೇಮಿಸಿತು.
ಬಾನ್ಸುರಿ ಸ್ವರಾಜ್ ಲಂಡನ್‌ನಲ್ಲಿ ಕಾನೂನು ಪದವಿ ಹಾಗೂ ಸ್ನಾತಕೋತರ ಪದವಿ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.