ಬಂಧನ
(ಪ್ರಾತಿನಿಧಿಕ ಚಿತ್ರ)
ರಾಂಪುರ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನ(ಐಎಸ್‌ಐ) ಶಂಕಿತ ಏಜೆಂಟ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ ಎಟಿಎಸ್‌ನ ಮೊರಾದಾಬಾದ್ ಘಟಕವು ಉತ್ತರ ಪ್ರದೇಶದ ಎಟಿಎಸ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ರಾಂಪುರದ ತಾಂಡಾ ಪಟ್ಟಣದಲ್ಲಿ ಆರೋಪಿ ಶಹಜಾದ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಐಎಸ್‌ಐ ಪರವಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಶಹಜಾದ್ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು, ಜತೆಗೆ ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಶಹಜಾದ್ ಐಎಸ್‌ಐಗೆ ರವಾನಿಸುತ್ತಿದ್ದ ಎಂದು ಎಸ್‌ಟಿಎಫ್ ತಿಳಿಸಿದೆ.
ಶಹಜಾದ್ ಹಲವು ವರ್ಷಗಳಿಂದ ಪಾಕಿಸ್ತಾನಕ್ಕೆ ಹಲವಾರು ಬಾರಿ ಪ್ರಯಾಣ ಬೆಳೆಸಿದ್ದು, ಗಡಿಯುದ್ದಕ್ಕೂ ಸೌಂದರ್ಯವರ್ಧಕಗಳು, ಬಟ್ಟೆಗಳು, ಮಸಾಲೆಗಳು ಮತ್ತು ಇತರೆ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಎಸ್‌ಟಿಎಫ್ ಆರೋಪಿಸಿದೆ.
ಲಖನೌದ ಎಸ್‌ಟಿಎಫ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಟಿಎಫ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.