ADVERTISEMENT

ಪಶ್ಚಿಮ ಬಂಗಾಳ: ಜೆಎಂಬಿ ಸಂಘಟನೆಯ ಶಂಕಿತ ಉಗ್ರನ ಬಂಧನ

ಪಿಟಿಐ
Published 11 ಡಿಸೆಂಬರ್ 2020, 7:52 IST
Last Updated 11 ಡಿಸೆಂಬರ್ 2020, 7:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿರ್ಬಮ್‌ ಜಿಲ್ಲೆಯಲ್ಲಿ ಬಾಂಗ್ಲಾದೇಶದ ಜಮಾತ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯ(ಜೆಎಂಬಿ) ಶಂಕಿತ ಕಾರ್ಯಕರ್ತನೊಬ್ಬನ್ನು ಕೋಲ್ಕತ್ತ ಪೊಲೀಸರ ವಿಶೇಷ ಕಾರ್ಯಪಡೆಯು ಬಂಧಿಸಿದೆ.

‘ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂಯೇತರ ಸಮುದಾಯದ ವಿರುದ್ಧ ಈತ ದ್ವೇಷ ಭಾವನೆಯ ಪ್ರಚಾರ ಮಾಡುತ್ತಿದ್ದ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶಂಕಿತನನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದ್ದು, ಈತನಿಂದ ಇಸ್ಲಾಂ ಮೂಲಭೂತವಾದಗಳ ಪುಸ್ತಕ, ದಾಖಲೆ, ಫೋನ್ ಮತ್ತು ಪಾಸ್‌ಪೋರ್ಟ್‌ ಅನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

‘ಆರೋಪಿಯು ಜಮಾತ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲಿ ಭಾಗಿಯಾಗಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.