ನವದೆಹಲಿ: ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವುದು ಮತ್ತು ಅದನ್ನು ಚಳವಳಿಯನ್ನಾಗಿ ಮಾಡಲು ‘ಸ್ವದೇಶಿ ಮೇಳ’ವನ್ನು ಆಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದರಿಗೆ ಸೋಮವಾರ ಸಲಹೆ ನೀಡಿದರು.
ಸಂಸದರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನವರಾತ್ರಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಂಸದರು ತಮ್ಮ ಕ್ಷೇತ್ರಗಳಲ್ಲಿನ ಜನರು ಮತ್ತು ವ್ಯಾಪಾರಿಗಳೊಂದಿಗೆ ಸಭೆಗಳನ್ನು ನಡೆಸಿ, ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಉತ್ತೇಜಿಸುವ ಕೆಲಸ ಮಾಡಬೇಕು. ಜಿಎಸ್‌ಟಿ ಸುಧಾರಣೆಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ಸ್ವಾವಲಂಬನೆಯು ಭಾರತದ ಅಭಿವೃದ್ಧಿಗೆ ಶಕ್ತಿಯ ಮಾರ್ಗವಾಗಿದೆ’ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.