ADVERTISEMENT

T20 WC| ಪಾಕಿಸ್ತಾನದ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ: ಯೋಗಿ ಎಚ್ಚರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಅಕ್ಟೋಬರ್ 2021, 4:58 IST
Last Updated 28 ಅಕ್ಟೋಬರ್ 2021, 4:58 IST
   

ಲಖನೌ: ಟಿ20 ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ದೇಶದ ಅಲ್ಲಲ್ಲಿ ಪಾಕ್‌ ಜಯದ ಸಂಭ್ರಮಾಚರಣೆ ನಡೆದ ಬಗ್ಗೆ ವರದಿಯಾಗುತ್ತಿವೆ. ಇಂಥ ವರ್ತನೆಗಳ ವಿರುದ್ಧ ದೇಶದ್ರೋಹ ಕಾನೂನು ಪ್ರಯೋಗಿಸುವ ಎಚ್ಚರಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ನೀಡಿದ್ದಾರೆ.

ಈ ಬಗ್ಗೆ ಯೋಗಿ ಆದಿತ್ಯನಾಥ್‌ ಅವರು ಗುರುವಾರ ಬೆಳಗ್ಗೆ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಇದರ ಮಧ್ಯೆ, ಕ್ರಿಕೆಟ್‌ ಪಂದ್ಯಾವಳಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಉತ್ತರ ಪ್ರದೇಶದ ಆಗ್ರಾದಲ್ಲಿ ಓದುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಲಾಗಿದೆ.

ADVERTISEMENT

ಅಕ್ಟೋಬರ್ 24ರ ಪಂದ್ಯದ ನಂತರ ದೇಶದ ವಿರುದ್ಧ ಟೀಕೆ ಮಾಡಿದ್ದಕ್ಕಾಗಿ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆಗಳಲ್ಲಿ ಐದು ಪ್ರಕರಣಗಳಲ್ಲಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.