ಜಾಕೀರ್ ಹುಸೇನ್
ಪಿಟಿಐ ಚಿತ್ರ
ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ದಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ಹಾಗೂ ಕೊಳಲು ವಾದಕ ರಾಕೇಶ್ ಚೌರಾಸಿಯಾ ತಿಳಿಸಿದ್ದಾರೆ. ಹುಸೇನ್ ಅವರನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದೆ.
73 ವರ್ಷ ವಯಸ್ಸಿನ ಹುಸೇನ್ ಅವರು ರಕ್ತದ ಒತ್ತಡಕ್ಕೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದರು ಎಂದು ಮೂಲಗಳು ಹೇಳಿವೆ. ‘ಹುಸೇನ್ ಅವರ ಆರೋಗ್ಯ ಸರಿ ಇಲ್ಲ. ಪರಿಸ್ಥಿತಿ ನಮ್ಮನ್ನು ಚಿಂತೆಗೆ ನೂಕಿದೆ’ ಎಂದು ಚೌರಾಸಿಯಾ ಹೇಳಿದ್ದಾರೆ.
ಹುಸೇನ್ ಅವರ ಆರೋಗ್ಯ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ‘ಜಾಕೀರ್ ಹುಸೇನ್ ಅವರಿಗೆ ಹುಷಾರಿಲ್ಲ. ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರ ಸಂಬಂಧಿ ಅಯೂಬ್ ಔಲಿಯಾ ತಿಳಿಸಿದ್ದಾರೆ. ಲಂಡನ್‌ನಲ್ಲಿ ಇರುವ ಔಲಿಯಾ ಅವರು, ಜಾಕೀರ್ ಅವರು ಶೀಘ್ರ ಗುಣವಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಬೇಕು ಎಂಬ ಮನವಿ ಮಾಡಿದ್ದಾರೆ’ ಎಂದು ಹಿರಿಯ ಪತ್ರಕರ್ತ ಪರ್ವೇಜ್ ಆಲಂ ಅವರು ಎಕ್ಸ್ ಮೂಲಕ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.