ADVERTISEMENT

ತಬ್ಲೀಗ್‌ ಜಮಾತ್ ಪ್ರಕರಣ: 82 ಬಾಂಗ್ಲಾದೇಶೀಯರಿಗೆ ಜಾಮೀನು

ಪಿಟಿಐ
Published 10 ಜುಲೈ 2020, 9:30 IST
Last Updated 10 ಜುಲೈ 2020, 9:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ತಬ್ಲೀಗ್‌ ಜಮಾತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಾಗೂ ವೀಸಾ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ ಬಾಂಗ್ಲಾದೇಶದ 82 ಜನರಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ಈ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ, ಕಾನೂನುಬಾಹಿರವಾಗಿ ಮತ ಪ್ರಚಾರ ನಡೆಸಿದ ಹಾಗೂ ಕೋವಿಡ್‌–19 ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಿದ್ದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದ ಆರೋಪವೂ ಇತ್ತು.

ಚೀಫ್‌ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಗುರ್‌ಮೊಹಿನಾ ಕೌರ್‌ ಅವರು ಜಾಮೀನು ಮಂಜೂರು ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.