ADVERTISEMENT

ಮುಕ್ತ, ನ್ಯಾಯಸಮ್ಮತ ಚುನಾವಣೆ ಪ್ರತಿಜ್ಞೆ ಸ್ವೀಕರಿಸಲು ರಾಜ್ಯಪಾಲರ ಸಲಹೆ

ಪಿಟಿಐ
Published 25 ಜನವರಿ 2021, 5:25 IST
Last Updated 25 ಜನವರಿ 2021, 5:25 IST
ಜಗದೀಪ್‌ ಧನಕರ್
ಜಗದೀಪ್‌ ಧನಕರ್   

ಕೋಲ್ಕತ: ‘ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತುಗಣರಾಜ್ಯೋತ್ಸವ ದಿನದಂದು ಪ್ರತಿಜ್ಞೆ ಸ್ವೀಕರಿಸಬೇಕು’ ಎಂದು ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಪಶ್ಚಿಮ ಬಂಗಾಳದ ಜನತೆಗೆ ಸಲಹೆ ಮಾಡಿದ್ದಾರೆ. ರಾಜ್ಯ ವಿಧಾನಸಭೆಗೆ ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯು ಬೆಳಗಿದಾಗ ಮಾತ್ರವೇ ರಾಜ್ಯದ ಅಭಿವೃದ್ಧಿಯೂ ಸಾಧ್ಯ. ಇದಕ್ಕಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಗತ್ಯ. ಹೀಗಾಗಿ, ಮುಕ್ತ ಚುನಾವಣೆಯ ಪ್ರತಿಜ್ಞೆ ಸ್ವೀಕರಿಸಿ ಹಿಂಸೆಯನ್ನು ಹತ್ತಿಕ್ಕೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ

ಟ್ವೀಟ್‌ನ ಲಿಂಕ್‌ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ಖಾತೆ, ರಾಜ್ಯ ಗೃಹ ಇಲಾಖೆಯ ಅಧಿಕೃತ ಖಾತೆ ಮತ್ತು ಪಶ್ಚಿಮ ಬಂಗಾಳ ಪೊಲೀಸ್‌ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯ ಜೊತೆಗೆ ಹಂಚಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.