ADVERTISEMENT

ಉತ್ತರ ಪ್ರದೇಶ: ಎಸ್‌ಪಿ ಜತೆ ಮೈತ್ರಿ ಮಾತುಕತೆ–ಆರ್‌ಎಲ್‌ಡಿ ಹೇಳಿಕೆ

ಪಿಟಿಐ
Published 28 ಅಕ್ಟೋಬರ್ 2021, 6:31 IST
Last Updated 28 ಅಕ್ಟೋಬರ್ 2021, 6:31 IST
ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ
ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ   

ಮಥುರಾ: ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷದ ನಡೆಯಲಿರುವ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮಾತುಕತೆ ನಡೆಯುತ್ತಿದೆ ಎಂದು ರಾಷ್ಟ್ರೀಯ ಲೋಕದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಬುಧವಾರ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಪಕ್ಷವನ್ನು ರಾಜ್ಯದ ಜನರು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.

ಇಲ್ಲಿ ಆಶೀರ್ವಾದ ಪಥ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಚೌಧರಿ, ಉತ್ತರ ಪ್ರದೇಶದ ಭವಿಷ್ಯವನ್ನು ಬದಲಾಯಿಸುವ ಕೀಲಿಯು ರೈತರು ಮತ್ತು ಯುವ ಸಮುದಾಯದ ಕೈಯಲ್ಲಿದೆ ಎಂದು ಹೇಳಿದರು.

ADVERTISEMENT

‘ಆರ್‌ಎಲ್‌ಡಿ ಮತ್ತು ಸಮಾಜವಾದಿ ಪಕ್ಷದ ನಡುವೆ ಮೈತ್ರಿಗಾಗಿ ಮಾತುಕತೆ ನಡೆಯುತ್ತಿದೆ’ ಎಂದು ಅವರು ರ್‍ಯಾಲಿಯಲ್ಲಿ ತಿಳಿಸಿದರು.

ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಉತ್ತರ ಪ್ರದೇಶ ರಾಜ್ಯವು ಯಾವ್ಯಾವ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕೇಳಿದರು. ‘ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತು ಆಡಳಿತ ಪಕ್ಷದ ನಾಯಕರ ಸುಳ್ಳು ಹೇಳಿಕೆಗಳೇ ಅವರ ಸಾಧನೆಯಾಗಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.