ADVERTISEMENT

ತಮಿಳು ಬಂದರಷ್ಟೇ ತಮಿಳುನಾಡಿನಲ್ಲಿ ಸರ್ಕಾರಿ ಕೆಲಸ

ಪಿಟಿಐ
Published 4 ಡಿಸೆಂಬರ್ 2021, 16:19 IST
Last Updated 4 ಡಿಸೆಂಬರ್ 2021, 16:19 IST
ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್
ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್   

ಚೆನ್ನೈ: ತಮಿಳುನಾಡು ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ತಮಿಳು ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಈ ಬಗ್ಗೆ ಶನಿವಾರ ಮಾಹಿತಿ ನೀಡಿದರು.

'ರಾಜ್ಯ ನೇಮಕಾತಿ ಮಂಡಳಿಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ತಮಿಳು ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ರಾಜ್ಯ ಸರ್ಕಾರವು ಶುಕ್ರವಾರ ಅಂಗೀಕರಿಸಿದೆ' ಎಂದು ಅವರು ತಿಳಿಸಿದರು.

ADVERTISEMENT

'ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಲು ವಿದ್ಯಾರ್ಥಿಯು ತಮಿಳು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 40 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ' ಎಂದು ಅವರು ಹೇಳಿದರು.

'ಈ ಹೊಸ ನೀತಿಯು ಸಾಮಾಜಿಕ ನ್ಯಾಯ ಸಾಧಿಸಲು ನೆರವಾಗಲಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮುಖ್ಯತೆ ನೀಡಲಾಗುವುದು' ಎಂದು ಅವರು ಹೇಳಿದರು. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.