ADVERTISEMENT

ಕೋವಿಡ್: ಮೃತರ ಸಂಬಂಧಿಕರಿಗೆ ₹50 ಸಾವಿರ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ಡೆಕ್ಕನ್ ಹೆರಾಲ್ಡ್
Published 8 ಡಿಸೆಂಬರ್ 2021, 4:04 IST
Last Updated 8 ಡಿಸೆಂಬರ್ 2021, 4:04 IST
ಕೋವಿಡ್ ಲಸಿಕೆ ನೀಡಿಕೆ – ಪಿಟಿಐ ಚಿತ್ರ
ಕೋವಿಡ್ ಲಸಿಕೆ ನೀಡಿಕೆ – ಪಿಟಿಐ ಚಿತ್ರ   

ಚೆನ್ನೈ: ಕೋವಿಡ್–19 ಸೋಂಕಿನಿಂದ ಮೃತಪಟ್ಟವರ ಸಂಬಂಧಿಕರಿಗೆ ₹50,000 ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

ಈ ಕುರಿತು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಡಿಸೆಂಬರ್ 3ರಂದೇ ಆದೇಶ ಹೊರಡಿಸಿದೆ. ಪರಿಹಾರ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋವಿಡ್ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಸಂದರ್ಭ ಹಾಗೂ ಕೋವಿಡ್ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದವರೂ ಸೇರಿದಂತೆ ಕೋವಿಡ್‌ನಿಂದ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ 2021ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗೆ ಅನುಗುಣವಾಗಿಯೇ ಪರಿಹಾರ ವಿತರಣೆ ನಡೆಯಲಿದೆ. ದೇಶದಲ್ಲಿ ಮೊದಲ ಕೋವಿಡ್ ಪ್ರಕರಣ ವರದಿಯಾದ ದಿನದಿಂದ ಅನ್ವಯವಾಗುವಂತೆ ಪರಿಹಾರ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.