ADVERTISEMENT

ಕೊಯಮತ್ತೂರು ದಕ್ಷಿಣ‌ ವಿಧಾನಸಭಾ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧೆ

ಏಜೆನ್ಸೀಸ್
Published 12 ಮಾರ್ಚ್ 2021, 9:22 IST
Last Updated 12 ಮಾರ್ಚ್ 2021, 9:22 IST
ನಟ, ರಾಜಕಾರಣಿ ಕಮಲ್ ಹಾಸನ್
ನಟ, ರಾಜಕಾರಣಿ ಕಮಲ್ ಹಾಸನ್   

ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ್‌ ನೀಧಿ ಮಯಂ (ಎಂಎನ್‌ಎಂ) ಪಕ್ಷದ ಸ್ಥಾಪಕ, ನಟ, ರಾಜಕಾರಣಿ ಕಮಲ್‌ ಹಾಸನ್‌ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯು ಏಪ್ರಿಲ್ 6ರಂದು ನಡೆಯಲಿದ್ದು, ಮೇ 2ರಂದು ಮತ ಎಣಿಕೆಯೊಂದಿಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಗುರುವಾರವಷ್ಟೇಮಕ್ಕಳ್‌ ನೀಧಿ ಮಯಂಚುನಾವಣೆಗೆ ಸ್ಪರ್ಧಿಸಲಿರುವ 70 ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಿತ್ತು.

ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಉತ್ತಮ ಆಡಳಿತ ನೀಡುವುದು ಪಕ್ಷದ ಗುರಿಯಾಗಿದೆ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ದಿವಂಗತ ತಂದೆ ಶ್ರೀನಿವಾಸನ್ ಅವರನ್ನು ಸ್ಮರಿಸಿರುವ ಕಮಲ್ ಹಾಸನ್, 'ನಾನು ಐಎಎಸ್ ಅಧಿಕಾರಿಯಾಗಬೇಕೆಂಬುದು ನನ್ನ ತಂದೆಯ ಕನಸಾಗಿತ್ತು. ಅವರ ಕನಸನ್ನು ನನಸಾಗಿಸಲು ಸಾಧ್ಯವಾಗದಿದ್ದರೂ ನನ್ನ ಪಕ್ಷವು ಅನೇಕ ಐಎಎಸ್ ಅಧಿಕಾರಿಗಳನ್ನು ಒಳಗೊಂಡಿದೆ. ಇದು ನನಗೆ ಹೆಮ್ಮೆಯ ಕ್ಷಣವಾಗಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿಇದೇ ಮೊದಲ ಬಾರಿಗೆ ಮಕ್ಕಳ್ ನೀಧಿ ಮಯಂ ಪಕ್ಷವು ಸ್ಪರ್ಧೆಗಿಳಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.