ADVERTISEMENT

ತಮಿಳುನಾಡು ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಪಿಟಿಐ
Published 1 ಡಿಸೆಂಬರ್ 2025, 4:13 IST
Last Updated 1 ಡಿಸೆಂಬರ್ 2025, 4:13 IST
<div class="paragraphs"><p> ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

ಪಿಟಿಐ ಚಿತ್ರ

ನವದೆಹಲಿ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

‘ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಬಸ್‌ ಅಪಘಾತದಲ್ಲಿ ಜನರು ಸಾವಿಗೀಡಾದ ಘಟನೆ ತೀವ್ರ ದುಃಖ ತಂದಿದೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಕೊಡಲಾಗುವುದು ಎಂದು ಮೋದಿ ಹೇಳಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ 8 ಮಂದಿ ಮಹಿಳೆಯರು ಹಾಗೂ ಇಬ್ಬರು ಪುರುಷರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರೈಕುಡಿಯಿಂದ 15 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.